ಚಂದ್ರವಳ್ಳಿ ನ್ಯೂಸ್, ದೇವನಹಳ್ಳಿ:
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಶ್ರೀರಂಗಪಟ್ಟಣದಲ್ಲಿ ನಡೆದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಸಂಘಟನಾ ಕಾರ್ಯಗಾರದಲ್ಲಿ ಭಾಗವಹಿಸಿ, ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.
ಪಕ್ಷ ಸಂಘಟನೆ , ನಾಯಕತ್ವ ಗುಣ ಮತ್ತು ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಕಾರ್ಯಾಗಾರದಲ್ಲಿ ಯುವಕರಿಗೆ ತರಬೇತಿ ನೀಡಲಾಯಿತು. ಈ ವೇಳೆ ಮಾಜಿ ಶಾಸಕರಾದ ಶ್ರೀ ನಿಸರ್ಗ ನಾರಾಯಣಸ್ವಾಮಿ, ಮುಖಂಡರಾದ ಜಗದೀಶ್, ರವಿ ಅವರು ಸೇರಿದಂತೆ ಕ್ಷೇತ್ರದ ಯುವಕರು ಜೊತೆಯಲ್ಲಿದ್ದರು.