ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನಕ್ಕೆ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ಗೌಡ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಬೆಂಗಳೂರು ನಗರ ಉಸ್ತುವಾರಿ ಜಗದೀಶ್‌ಬಿ. ನಾಗರಾಜಯ್ಯ, ಚಾಮರಾಜಪೇಟೆ ಕ್ಷೇತ್ರದ ಅಧ್ಯಕ್ಷ ಡೇವಿಡ್, ಸ್ಥಳೀಯ ಮುಖಂಡರಾದ ಸಿ. ಗೋವಿಂದರಾಜು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ನಾಗೇಶ್ ರಾವ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷರಾದ ತುಳಸಿ ರಾಮ್,
ಬೆಂಗಳೂರು ನಗರ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಸಿ.ಎಂ. ನಾಗರಾಜು, ನಾಗರಾಜ್‌ಸಿ ಮರಿಯಪ್ಪ, ಕಾರ್ಮಿಕ ವಿಭಾಗದ ಅಧ್ಯಕ್ಷ ಗೋಪಾಲ್‌ಎಂ., ಕ್ಷೇತ್ರದ ಮಹಿಳಾ ವಿಭಾಗದ ಅಧ್ಯಕ್ಷೆ ಪ್ರಿಯಾ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಶ್ರೀವೇಲು, ಸ್ಯಾಮ್ಯುಯೆಲ್, ಯುವ ಮುಖಂಡರಾದ ಸುಗಮ ಗೌಡ ಅವರು ಸೇರಿದಂತೆ ಹಲವು ಮುಖಂಡರು ಹಾಗೂ ಕ್ಷೇತ್ರದ ಪದಾಧಿಕಾರಿಗಳು ಭಾಗವಹಿಸಿದ್ದರು.