ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮಹಾನಗರದಲ್ಲಿ ಪಕ್ಷದ ಸಂಘಟನೆ, ಸದಸ್ಯತ್ವ ನೋಂದಣಿ ಹಾಗೂ ಸಾಂಸ್ಥಿಕ ಚುನಾವಣೆಯ ಬಗ್ಗೆ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಚ್. ಎಂ. ರಮೇಶ್ ಗೌಡರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರುಗಳ ಸಭೆ ನಡೆಯಿತು.
ಈ ಸಭೆಯಲ್ಲಿ ಬೆಂಗಳೂರು ನಗರದ ಜಿಲ್ಲಾ ಚುನಾವಣಾಧಿಕಾರಿ ಶೈಲಾ ಸಂತೋಜಿ ರಾವ್, ಯಲಹಂಕ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವೇಣುಗೋಪಾಲ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ಮಾಜಿ ನಗರ ಪಾಲಿಕೆ ಸದಸ್ಯರಾದ ಎಂ. ಮುನಿಸ್ವಾಮಪ್ಪ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ವಿ. ನಾಗೇಶ್ವರ ರಾವ್, ಬೆಂಗಳೂರು ನಗರ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್.ರಮೇಶ್, ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಂ. ವೆಂಕಟಸ್ವಾಮಿ,
ವಿಜಯನಗರ ಕ್ಷೇತ್ರದ ಅಧ್ಯಕ್ಷ ಪ್ರಕಾಶ್ ಗೌಡ, ಬೊಮ್ಮನಹಳ್ಳಿ ಕ್ಷೇತ್ರದ ಅಧ್ಯಕ್ಷ ಬಿ ಎಸ್ ಗಣೇಶ್, ಪುಲಕೇಶಿ ನಗರ ಕ್ಷೇತ್ರದ ಅಧ್ಯಕ್ಷ ಸೈಯದ್ ತಹಸಿನ್, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಅಧ್ಯಕ್ಷ ಎಂ ಚಂದ್ರೇಗೌಡ, ಸರ್ವಜ್ಞ ನಗರ ಕ್ಷೇತ್ರದ ಅಧ್ಯಕ್ಷ ಟಿ ಶಿವಕುಮಾರ್ ಅವರು ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರುಗಳು ಮತ್ತು ವಿವಿಧ ವಿಭಾಗಗಳ ಅಧ್ಯಕ್ಷರುಗಳಾದ ಎಂ ಗೋಪಾಲ್ (ಕಾರ್ಮಿಕ ವಿಭಾಗ), ಆರ್ ಸ್ಯಾಮುಯಲ್ (ಯುವ ಜನತಾದಳ), ವಿ. ಜನಾರ್ಧನ್ (ಪರಿಶಿಷ್ಟ ಜಾತಿ ವಿಭಾಗ), ತಿಮ್ಮೇಗೌಡ (ಸಾರಿಗೆ ವಿಭಾಗ), ಅಫ್ರೋಜ್ ಬೇಗ್ (ಅಲ್ಪಸಂಖ್ಯಾತರ ವಿಭಾಗ) ಸೇರಿದಂತೆ ಎಲ್ಲಾ ವಿಭಾಗಗಳ ಅಧ್ಯಕ್ಷರುಗಳು ಭಾಗವಹಿಸಿದ್ದರು.