ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೋಡಂಬಳ್ಳಿ ಅಕ್ಕೂರು, ಮಳೂರು, ಬೇವೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರದ ಭಾರೀಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿ ಮಾತಾಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತೆರೇ ಬೆನ್ನೆಲುಬು. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಪಕ್ಷ ಸಂಘಟನೆಯಲ್ಲಿ ತೊಡಿಗಿದ್ದು ಪಕ್ಷದ ಉಳುವಿಗಾಗಿ ಶ್ರಮಿಸುತ್ತಿದ್ದಾರೆಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ಹೆಚ್.ಸಿ ಜಯಮುತ್ತು, ಹಾಪ್ ಕಾಮ್ಸ್ ದೇವರಾಜು,ನಗರ ಘಟಕದ ಅಧ್ಯಕ್ಷ ಅಜಯ್, ರಾಮಚಂದ್ರು,
ಕುಕ್ಕೂರು ದೊಡ್ಡಿ ಜಯರಾಮ್, ನಾಗರಾಜ್, ನಿಡಗೋಡಿ ಬಾಬು ಸೇರಿದಂತೆ ತಾಲೂಕಿನ ಜೆಡಿಎಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.