ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ವಿಧಾನಸಭಾ ಕ್ಷೇತ್ರದ ಹೆಬ್ಬಗೋಡಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಮೀಳಾ ರಾಮಚಂದ್ರ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್‌ನ ಸುಜಾತ ಕೆ. ಪಿ. ರಾಜು ಅವರು ಎನ್‌ಡಿಎ ವತಿಯಿಂದ ಆಯ್ಕೆಯಾಗಿದ್ದು ಈ ಇವರಿಬ್ಬರನ್ನು ಖ್ಯಾತ ವೈದ್ಯರು, ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ನಿಕಟಪೂರ್ವ ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ, ಶಾಸಕರುಗಳಾದ ಸಿ. ಕೆ. ರಾಂಮೂರ್ತಿ ಮತ್ತು ಎಂ. ಕೃಷ್ಣಪ್ಪ, ಬಿಜೆಪಿ ಮುಖಂಡ ಹುಳ್ಳಲ್ಲಿ ಶ್ರೀನಿವಾಸ್, ಹೆಬ್ಬಗೋಡಿ ನಗರಸಭೆಯ ಎಲ್ಲಾ ಸದಸ್ಯರು ಹಾಗೂ ಬಿಜೆಪಿ ಮತ್ತು ಜೆಡಿಎಸ್‌ನ ಕಾರ್ಯಕರ್ತರು ಉಪಸ್ಥಿತರಿದ್ದರು.