ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಪಕ್ಷದ ವತಿಯಿಂದ ರಾಜ್ಯದಲ್ಲಿಯೇ ಮೊದಲ ಬಾರಿಗೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್ (BLA)ಗಳ ಕಾರ್ಯಾಗಾರ
ನಡೆಸಿದ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ ಅವರಿಗೆ, ಕಾರ್ಯಾಗಾರ ಉದ್ಘಾಟಿಸಿದ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರಿಗೆ ಹಾಗೂ ಜಿಲ್ಲಾಧ್ಯಕ್ಷ ಡಿ. ರಮೇಶ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಭೆಯಲ್ಲಿ ಭಾಗವಹಿಸಿದ ಪಕ್ಷದ ನಾಯಕರಿಗೆ, ಪದಾಧಿಕಾರಿಗಳಿಗೆ, ಸಂಪನ್ಮೂಲ ವ್ಯಕ್ತಿಗಳಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳು. ನಾವೆಲ್ಲರೂ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ನಿರಂತರವಾಗಿ ಶ್ರಮಿಸೋಣ ಎಂದು ಅವರು ಕರೆ ನೀಡಿದ್ದಾರೆ.

