ಫೆ. 27ರಂದು ಉದ್ಯೋಗ ಮೇಳ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಫೆಬ್ರವರಿ
27 ರಂದು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಉದ್ಯೋಗಮೇಳ” ಆಯೋಜಿಲಾಗಿದ್ದು ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗುತ್ತಿದ್ದು ಉದ್ಯೋಗಮೇಳದಲ್ಲಿ ಅಂದಾಜು 75ಕ್ಕಿಂತ ಹೆಚ್ಚು ನಿಯೋಜಕರು/ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ 3000ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

- Advertisement - 

ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು QR Code : ಅಥವಾ https://bangalorerural.nic.in ಬಳಸಿಕೊಂಡು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳದ ದಿನವು ಕೂಡ “ಅಭ್ಯರ್ಥಿಗಳ ನೋಂದಣಿ ಕೌಂಟರ್” ಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದು.

10ನೇ ತರಗತಿಗಿಂತ ಕಡಿಮೆ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.

- Advertisement - 

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 5 ಬಯೋಡಾಟ(ಸ್ವ-ವಿವರ) ಗಳ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದ್ದು ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ.

 

 

 

Share This Article
error: Content is protected !!
";