ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಬೆಂಗಳೂರು ಮಾತ್ರವಲ್ಲ ದೇಶಾದ್ಯಂತ ಈರುಳ್ಳಿ ಕಡಿಮೆ ಬೆಲೆಗೆ ಈರುಳ್ಳಿ ಕೈಗೆಟುಕುವಂತೆ ಕೇಂದ್ರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದೆ. ಇದನ್ನ ತಡೆಯಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದರು.
ದೇಶಾದ್ಯಂತ 570 ಕಡೆ ಬೆಲೆ ಮಾನಿಟರಿಂಗ್ ಕೇಂದ್ರಗಳಿವೆ. ಎಲ್ಲ ಕಡೆಯೂ ಈರುಳ್ಳಿ ಬೆಲೆ ನಿಯಂತ್ರಿಸಿ ಕಡಿಮೆ ಬೆಲೆಗೆ ಈರುಳ್ಳಿಯನ್ನು ಕೇಂದ್ರವೇ ಪೂರೈಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.