ರಾಹುಲ್ ನೇತೃತ್ವದಲ್ಲಿ ಕೇಂದ್ರದಲ್ಲಿ ಎಂದೂ ಅಧಿಕಾರಕ್ಕೆ ಬರೋದಿಲ್ಲ-ಜೋಶಿ

News Desk

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ನಾವೆಂದೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಅಧಿಕಾರಕ್ಕೆ ಬರೋದಿಲ್ಲ ಎಂಬ ಸತ್ಯ ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಎಂದೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂಬ ಸತ್ಯ ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ. ಹಾಗಾಗಿ ಶತಾಯ-ಗತಾಯ ಕೇಂದ್ರ ಸರ್ಕಾರ ವಿರುದ್ಧ ಇಲ್ಲ ಸಲ್ಲದ ಮಾತಾಡುತ್ತಾರೆ ಅಷ್ಟೇ ಎಂದು ಜೋಶಿ ತಿಳಿಸಿದರು.

ಯಾವುದೇ ಕಾಲಕ್ಕೂ ದೇಶದಲ್ಲಿ ಬಿಜೆಪಿಯೇ ಬಲಿಷ್ಠವಾಗುತ್ತದೆ. ಸದ್ಯ ಮೋದಿ ನಾಯಕತ್ವದಲ್ಲಿ ಪ್ರಬಲವಾಗಿದೆ. ಕೆಲವು ವರ್ಷಗಳ ನಂತರ ಮತ್ಯಾರೋ ಪ್ರಬಲ ನೇತಾರರು ಮುಂಚೂಣಿಗೆ ಬರುತ್ತಾರೆ. ಕಾಂಗ್ರೆಸ್ ಅಧಿಕಾರದ ನಿರೀಕ್ಷೆಯಲ್ಲೇ ಕಾಲ ಕಳೆಯಬೇಕಾಗುತ್ತದೆ ಎಂದು ಸಚಿವ ಜೋಶಿ ಭವಿಷ್ಯ ನುಡಿದರು.

ಕೇಂದ್ರದಲ್ಲಿ ಅಧಿಕಾರದಿಂದ ವಂಚಿತವಾಗಿರುವ ಕಾಂಗ್ರೆಸ್‌ಹತಾಶೆಯಲ್ಲಿ ಕೇಂದ್ರದ ನಿರ್ಣಯಗಳನ್ನು ವಿರೋಧಿಸುತ್ತದೆ. ಮುಂದೆಯೂ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂಬ ಹತಾಶೆಯಲ್ಲಿ ಕಾಂಗ್ರೆಸ್ ನಲ್ಲಿದೆ. ಹಾಗಾಗಿಒಂದು ದೇಶ ಒಂದು ಚುನಾವಣೆಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಣಯವನ್ನು ಕಾಂಗ್ರೆಸ್ ವಿರೋಧಿಸುತ್ತಲೆ ಇದೆ. ಇದಕ್ಕೆ ಅವರಲ್ಲಿನ ಹತಾಶ ಮನಸ್ಥಿತಿಯೇ ಕಾರಣ ಎಂದು ಹೇಳಿದರು.

 

- Advertisement -  - Advertisement -  - Advertisement - 
Share This Article
error: Content is protected !!
";