ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ನೋಂ.)ದ ಚುನಾವಣೆಯು ದೇವನಹಳ್ಳಿ ಟೌನ್ ನಲ್ಲಿ ರಾಜ್ಯ ಹಾಗೂ ಜಿಲ್ಲಾ ಘಟಕದ ಚುನಾವಣೆಯು ನವೆಂಬರ್ 9 ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹೊನ್ನಮ್ಮ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಕೊತ್ತೂರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ದೇವನಹಳ್ಳಿ ನಗರದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಘದ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು ಅ.17 ರಿಂದ ನಾಮಪತ್ರ ವಿತರಣೆ ಆರಂಭವಾಗಿದೆ.
ಅಕ್ಟೋಬರ್ 19 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ, 27ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, 30ರಂದು ನಾಮಪತ್ರ ಕೊನೆಯ ದಿನವಾಗಿದ್ದು ಅಂದೆ ಅರ್ಜಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು, ನವೆಂಬರ್ 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ಮತದಾನ ಮಾಡಲಾಗುವುದು ಅಂದೆ 3:30ಕ್ಕೆ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು ಎಂದರು.

