ಪತ್ರಕರ್ತರು, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
“77ನೇ ಗಣರಾಜ್ಯೋತ್ಸವ
ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.

ಇದಕ್ಕೂ ಮುನ್ನ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ನಂತರ ‌ಪತ್ರಕರ್ತ ಗುರುಪ್ರಸಾದ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ, ಪೌರಕಾರ್ಮಿಕರಾದ ಮುತ್ಯಾಲಕ್ಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

- Advertisement - 

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್, ತಹಶೀಲ್ದಾರ್ ಮಲ್ಲಪ್ಪ, ಬಿಇಒ ಶಂಕ್ರಪ್ಪ, ತಾ.ಪಂ ಇಒ ಮಂಜುನಾಥ್ ಹರ್ತಿ, ನಗರಸಭಾ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";