ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಿಸದಿರಲು ಪತ್ರಕರ್ತರ ಮನವಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿದ್ದು ಠಾಣೆಯನ್ನು ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈಎಸ್ಪಿ ಪಿ.ರವಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲ ವಾಗುವುದು.ಆದ್ದರಿಂದ ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು. 

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಛೇರಿ, ಜಿಲ್ಲಾ ಪ್ರಧಾನ ಅಂಚೆ ಕಛೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಛೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು. ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರ ದಲ್ಲೇ ಉಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಪಿ.ರವಿ ರವರು ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು ಮನವಿಯನ್ನು ಮೇಲಾಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿಸುವ ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ,ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು,ರಮೇಶ್ ಬಾಬು, ಶಿವರಾಜ‌ನೇಸರ ಉಪಸ್ಥಿತರಿದ್ದರು.

 

- Advertisement -  - Advertisement - 
Share This Article
error: Content is protected !!
";