ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಿಮಗಿಷ್ಟವಾದ ಪದವಿ ಪಡೆಯಲು ಜುಲೈ ಆವೃತ್ತಿ ಪ್ರವೇಶಾತಿ ಆರಂಭ

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2024-25ನೇ ಜುಲೈ ಆವೃತ್ತಿ  ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು, ಸ್ನಾತಕ / ಸ್ನಾತಕೋತ್ತರ ಕೋರ್ಸ್ಗಳಾದ ಬಿ. / ಬಿ.ಕಾಂ / ಬಿ.ಎಸ್.ಡಬ್ಲ್ಯೂ / ಬಿ.ಬಿ. / ಬಿ.ಸಿ. / ಬಿ.ಎಸ್ಸಿ-(ಜನರಲ್ ಮತ್ತು .ಟಿ), ಬಿ.ಎಲ್..ಎಸ್ಸಿ / ಎಂ. / ಎಂ.ಸಿ.ಜೆ / ಎಂ.ಎಸ್.ಡಬ್ಲ್ಯೂ / ಎಂ.ಕಾಂ / ಎಂ.ಎಲ್..ಎಸ್ಸಿ / ಎಂ.ಸಿ. / ಎಂ.ಎಸ್ಸಿ / ಎಂ.ಬಿ..      ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್ / ಡಿಪ್ಲೋಮಾ ಪ್ರೋಗ್ರಾಮ್ಸ್ / ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಲ್ಲೇಶ್ವರಂನ  ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದ್ದು ಪ್ರವೇಶಾತಿಗಳು ಜುಲೈ 22ರಿಂದ ಆರಂಭವಾಗಿವೆ.
ಆಸಕ್ತ ವಿದ್ಯಾರ್ಥಿಗಳಿಗೆ ಮತ್ತು ಪೋಷಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ನಲ್ಲಿ ಕೆ.ಎಸ್.ಓಯು ಪ್ರವೇಶಾತಿ ಪೊರ್ಟಲ್  ಮೂಲಕ ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು.

ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ, ಎಸ್.ಡಬ್ಲ್ಯೂ.ಕೆ.ಆರ್.ಟಿ.ಸಿ, ಕೆ.ಕೆಆರ್.ಟಿಸಿ ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ.  ಕೋವಿಡ್ – 19 ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.  
ತೃತಿಯ ಲಿಂಗದ ವಿದ್ಯಾರ್ಥಿಗಳಿಗೆ, ದೃಷ್ಠಿ ಹೀನ ವಿದ್ಯಾರ್ಥಿಗಳಿಗೆ (ಬಿಎಡ್ ಮತ್ತು ಎಂ.ಬಿ.) ಹೊರತುಪಡಿಸಿ  ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು .ಬಿ.ಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಎಸ್.ಎಸ್.ಪಿ. ಮುಖಾಂತರ ವಿದ್ಯಾರ್ಥಿ ವೇತನವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು03 ಅಥವಾ ಕಛೇರಿ ದೂರವಾಣಿ ಸಂಖ್ಯೆ  080 – 23448811,  9741197921, 9483517160, 7760848564. 9620395584, ಪ್ರಾದೇಶಿಕ ನಿರ್ದೇಶಕಿ ಶಶಿಕಲಾ ಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon