ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರಸಭೆ ಮಾಜಿ ಉಪಾಧ್ಯಕ್ಷೆ ಜ್ಯೋತಿ ಲಕ್ಷ್ಮಿ ಗೋಪಿ ಯಾದವ್ ಇವರನ್ನು ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರಾದ ಡಿ ಸುಧಾಕರನವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಸಚಿವ ಸುಧಾಕರ್ ಮತ್ತು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾಲಾಂಬ ರವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಜ್ಯೋತಿಲಕ್ಷ್ಮಿ ಇವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿ ಗೌರವಿಸಿ ಪಕ್ಷದಲ್ಲಿ ರಾಜ್ಯಾದ್ಯಂತ ಸಂಚರಿಸಿ ಹೆಚ್ಚಿನ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಹಾಗೂ ಸ್ಥಳೀಯ ಜಿಲ್ಲಾ ಮತ್ತು ತಾಲೂಕ್ ಮುಖಂಡರ ಬೆಂಬಲದೊಂದಿಗೆ ಹೆಚ್ಚಿನ ಸೇವೆ ಸಲ್ಲಿಸುವುದಾಗಿ ಜ್ಯೋತಿಲಕ್ಷ್ಮಿ ತಿಳಿಸಿದ್ದಾರೆ.