ಚಂದ್ರವಳ್ಳಿ ನ್ಯೂಸ್, ಕಡಬನಕಟ್ಟೆ:
ತಾಲೂಕಿನ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದಲ್ಲಿ ಶನಿವಾರದಂದು ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಆಂಜನೇಯಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿ ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಉತ್ತಮ ಮಳೆಯಿಂದ ರೈತರ ಬದುಕು ಹಸನಾಗಲಿದೆ. ರೈತರು ಸಂತೋಷದಿಂದ ಇದ್ದರೆ ಈ ನಾಡು ಸಮೃದ್ದಿಯಿಂದ ಇರುತ್ತದೆ ಎಂದರು.
ಪ್ರತಿ ವರ್ಷ ಸಹ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ನಮ್ಮ ಕ್ಷೇತ್ರದ ಮತ್ತು ಜಿಲ್ಲೆಯ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

