ಕಾಡಸಿದ್ದೇಶ್ವರಸ್ವಾಮಿ ಕೂಡಲೇ ಕ್ಷಮೆ ಕೇಳಬೇಕು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಬೀರೂರು ಗ್ರಾಮದ ಬಸವ ಪರಂಪರೆಯ ವಿರಕ್ತಮಠದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಹಾರಾಷ್ಟ್ರದ ಕೊಲ್ಲಿಪುರ ಸಮೀಪದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರಸ್ವಾಮಿ ಕರ್ನಾಟಕದ ಲಿಂಗಾಯಿತ ಮಠಾಧೀಶರ ಒಕ್ಕೂಟದ ಪೂಜ್ಯರ ಕುರಿತು ಮಾನಹಾನಿಕರ ಮಾತುಗಳನ್ನಾಡಿರುವುದನ್ನು ಖಂಡಿಸಿ ಜಾಗತಿಕ ಲಿಂಗಾಯತ ಮಹಾಸಭಾದಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಕ್ಷಮೆ ಕೇಳುವಂತೆ ಒತ್ತಾಯಿಸಲಾಯಿತು.

ಕನೇರಿಸ್ವಾಮಿ ಲಿಂಗಾಯಿತ ಮಠಾಧೀಶರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಾಂವಿಧಾನಿಕ ಪದಗಳನ್ನು ಬಳಸಿರುವುದು ಸರಿಯಲ್ಲ. ಪ್ರತಿಷ್ಟಿತ ಒಕ್ಕೂಟದ ಮಠಾಧೀಶರನ್ನು ಹೆದರಿಸುವ ಕೀಳು ವ್ಯಕ್ತಿತ್ವವನ್ನು ಪ್ರದರ್ಶಿಸಿದ್ದಾರೆ. ಇಂತಹ ಹೇಳಿಕೆಗಳು ಧಾರ್ಮಿಕ ಸಹಿಷ್ಣುತೆಗೆ ಹಾಗೂ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುತ್ತದೆ. ಹಾಗಾಗಿ ಕೂಡಲೆ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.

- Advertisement - 

ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಜಿ.ಡಿ.ಕೆಂಚವೀರಪ್ಪ, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಟಿ.ಮಲ್ಲೇಶ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾಬಾಬು, ಪಾರ್ವತಮ್ಮ, ಪ್ರಧಾನ ಕಾರ್ಯದರ್ಶಿ ಎಂ.ರಂಗನಾಥ್, ಬಸವರಾಜ್ಕಟ್ಟಿ, ಮಂಜು, ಚಂದ್ರಶೇಖರ್, ನಾಗರಾಜು, ವಾಗೀಶ್ಬಾಬು, ಕೆ.ಇ.ಬಿ.ಷಣ್ಮುಖಪ್ಪ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";