ಕ್ಷಮೆ ಕೇಳದ ಕಮಲ್ ಹಾಸನ್

News Desk

ಚಂದ್ರವಳ್ಳಿ ನ್ಯೂಸ್, ಚೆನ್ನೈ:
ಖ್ಯಾತ ನಟ ಕಮಲ್ ಹಾಸನ್ ಅವರು ಮಂಗಳವಾರ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಅವರಿಗೆ ಪತ್ರ ಬರೆದಿದ್ದಾರೆ.

- Advertisement - 

ಕನ್ನಡ ಭಾಷೆ ಬಗ್ಗೆ ಹೇಳಿಕೆ ನೀಡಿ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ಕಮಲ್ ಹಾಸನ್ ಅವರ ಬಹುನಿರೀಕ್ಷಿತ ಥಗ್ ಲೈಫ್ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಬೇಕಾದರೆ ಕ್ಷಮೆ ಕೇಳಬೇಕೆಂದು ಹೈಕೋರ್ಟ್ ನ್ಯಾಯಾಧೀಶರು ಹೇಳಿದರೂ ಇದುವರೆಗೆ ಕ್ಷಮೆ ಕೇಳಿಲ್ಲ.

- Advertisement - 

ಬದಲಿಗೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದು ತಾವು ಯಾವ ಸಂದರ್ಭದಲ್ಲಿ ಕನ್ನಡ ಭಾಷೆ ಬಗ್ಗೆ ಹೇಳಿಕೆ ನೀಡಿದ್ದು ಮತ್ತು ತಮಗೆ ಕನ್ನಡ ಭಾಷೆ ಮೇಲೆ ಅಗೌರವ ಇಲ್ಲ, ಬದಲಿಗೆ ಪ್ರೀತಿಯಿದೆ ಎಂದು ಸಮರ್ಥನೆ ನೀಡಿದ್ದಾರೆ.

ಥಗ್ ಲೈಫ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ದಂತಕಥೆ ಡಾ. ರಾಜ್‌ಕುಮಾರ್ ಹಾಗೂ ಶಿವರಾಜ್‌ಕುಮಾರ್ ಅವರ ಬಗ್ಗೆ ಪ್ರೀತಿಯಿಂದ ಹೇಳಲಾದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ನಾವೆಲ್ಲರೂ ಒಂದೇ ಕುಟುಂಬದವರು ಎಂಬುದು ನನ್ನ ಉದ್ದೇಶವಾಗಿತ್ತು. ಕನ್ನಡ ಭಾಷೆಯ ಹಿರಿಮೆ ಕುಗ್ಗಿಸುವುದು ನನ್ನ ಉದ್ದೇಶ ಆಗಿರಲಿಲ್ಲ. ಕನ್ನಡ ಭಾಷೆಯ ಶ್ರೀಮಂತ ಇತಿಹಾಸದ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

- Advertisement - 

ನಟ ಶಿವರಾಜ್ ಕುಮಾರ್ ಅವರು ಥಗ್ ಲೈಫ್ ಆಡಿಯೊ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಖಾಸುಮ್ಮನೆ ಮುಜುಗರ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಅವರ ಬಗ್ಗೆ ಅನುಕಂಪ, ವಿಷಾದ ಉಂಟಾಗುತ್ತಿದೆ. ಅವರದ್ದಲ್ಲದ ತಪ್ಪಿಗೆ ಟೀಕೆ ಎದುರಿಸಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. ಆದರೆ ಅವರು ಬರೆದಿರುವ ಪತ್ರದಲ್ಲಿ ಎಲ್ಲಿಯೂ ಕನ್ನಡಿಗರ ಕ್ಷಮೆ ಕೇಳಿಲ್ಲ. ಹೈಕೋರ್ಟ್ ಸೂಚನೆಯನ್ನು ಕಮಲ್ ಹಾಸನ್ ಪಾಲಿಸದಿರುವುದು ವಿಪರ್ಯಾಸವಾಗಿದೆ.

 

 

Share This Article
error: Content is protected !!
";