ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕನಕದಾಸರ ಬದುಕು – ಸಾಹಿತ್ಯ ಮಾನವ ಬದುಕಿಗೆ ಜ್ಞಾನ ದೀಪ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ದಾಸ ಶ್ರೇಷ್ಠ, ಭಕ್ತಿಯಿಂದಲೇ ಭಗವಂತನನ್ನು ಒಲಿಸಿಕೊಂಡ ಶ್ರೀ ಕನಕದಾಸರ ಜಯಂತಿ ಅಂಗವಾಗಿ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕೀರ್ತನಕಾರರಾಗಿ, ಸಂತರಾಗಿ, ದಾರ್ಶನಿಕರಾಗಿ, ತತ್ವಜ್ಞಾನಿಯಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅವರು ನೀಡಿರುವ ಕೊಡುಗೆಗಳು ಹಾಗೂ ಅವರ ತತ್ವೋಪದೇಶಗಳನ್ನು ಪಾಲಿಸುವ ಮೂಲಕ ನಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳೋಣ ಎಂದು ವಿಜಯೇಂದ್ರ ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ರಾಜ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ.ಎ ಬಸವರಾಜ, ಹರತಾಳು ಹಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಕಾವಟಗಿಮಠ್, ಪ್ರಮುಖರಾದ ಪೂರ್ಣಿಮಾ ಪ್ರಕಾಶ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

