ಕನ್ನಡದ ಬಿಗ್  ಬಾಸ್​ ಮನೆಗೆ ಬೀಗ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಮನಗರ ಜಿಲ್ಲೆಯ ಬಿಡದಿ ಸಮೀಪದಲ್ಲಿ ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​- 12 ಶೋ ನಡೆಸುತ್ತಿದ್ದ ಜಾಲಿವುಡ್​ ಸ್ಟುಡಿಯೋ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿಲ್ಲ, ಹಲವು ರಕ್ಷಣಾ ಕ್ರಮಗಳನ್ನು ಅನುಸರಿಸಿಲ್ಲ ಎಂದು ತಾಲೂಕು ಆಡಳಿತ ಬಿಗ್ ಬಾಸ್ ಮನೆಗೆ ಬೀಗ ಹಾಕಿದೆ. ಜಾಲಿವುಡ್​ ಸ್ಟುಡಿಯೋಗೆ ತಾಲೂಕು ಆಡಳಿತ ನೋಟಿಸ್ ನೀಡಲಾಗಿತ್ತು. ಇದೀಗ ಸ್ಟುಡಿಯೋಗೆ ರಾಮನಗರದ ತಹಶೀಲ್ದಾರ್ ತೇಜಸ್ವಿನಿ ಅವರು ಬೀಗ ಜಡಿದಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಗ್ ಬಾಸ್​- 12ರ ಸ್ಪರ್ಧಿಗಳನ್ನು ಹೊರಗೆ ಕಳುಹಿಸಿ ಬೀಗ ಹಾಕಲಾಗಿದೆ.
ಬಿಗ್ ಬಾಸ್ ನ ಎಲ್ಲಾ ಸ್ಪರ್ಧಿಗಳ ವಾಸ್ತವ್ಯಕ್ಕೆ ಈಗಲ್ ಟನ್ ರೆಸಾರ್ಟ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಆಯೋಜಕರು
, ಸ್ಪರ್ಧಿಗಳನ್ನು ಕಾರಿನಲ್ಲಿ ಕರೆದೊಯ್ದು ಈಗಲ್ಟರ್ ರೆಸಾರ್ಟ್​​ ಗೆ ಶಿಫ್ಟ್ ಮಾಡಿದ್ದಾರೆ.
ಬಿಗ್​ಬಾಸ್ ಕನ್ನಡ ಸೀಸನ್ – 12ರ ಶೋ ಆರಂಭವಾದ ಎರಡೇ ವಾರದಲ್ಲಿ ದೊಡ್ಡ ಮನೆಗೆ ಬೀಗ ಮುದ್ರೆ ಬಿದ್ದಿದೆ.

- Advertisement - 

ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಬಿಗ್ ಬಾಸ್ ಮನೆಯಿದೆ. ಮಾಲಿನ್ಯ ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಆರೋಪದಡಿ ಬಿಡದಿಯ ಬಳಿಯ ಜಾಲಿವುಡ್ ಸ್ಟುಡಿಯೋ & ಅಡ್ವೆಂಚರ್ಸ್ ಪಾರ್ಕ್ ಬಂದ್​​ಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್​ ನೀಡಿತ್ತು. ನಿತ್ಯ ಜಲಕ್ರೀಡೆ​ಗೆ 2.50 ಲಕ್ಷ ಲೀಟರ್ ನೀರು ಬಳಕೆಯಾಗುತ್ತಿದ್ದು, ನಿಯಮಗಳ ಪ್ರಕಾರ ನೀರನ್ನು ಶುದ್ದೀಕರಣ ಮಾಡಿ ಪುನರ್ಬಳಕೆ ಮಾಡಬೇಕು. ಆದರೆ ಪುನರ್ಬಳಕೆ ಮಾಡದೇ ನಿಯಮ ಉಲ್ಲಂಘನೆ ಮಾಡಲಾಗಿದೆ ಹಾಗೂ ಹಸಿ ಕಸ-ಒಣ ಕಸ ವಿಂಗಡಿಸದೇ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಹಾಗೂ ತ್ಯಾಜ್ಯಮಿಶ್ರಿತ ನೀರನ್ನು ಚರಂಡಿಗೆ ಬಿಟ್ಟಿರುವ ಆರೋಪ ಮಾಡಲಾಗಿದೆ.

ಮಂಗಳವಾರ ರಾತ್ರಿಯೇ ಬಿಗ್ ಬಾಸ್ ಮನೆ ಖಾಲಿ ಮಾಡಬೇಕೆಂದು ರಾಮನಗರ ತಹಶೀಲ್ದಾರ್ ತೇಜಸ್ವಿನಿ ಅವರು ಸೀಜ್​ ಮಾಡಿದ್ದಾರೆ. ಅಲ್ಲದೆ ಅಧಿಕಾರಿಗಳ ಸೂಚನೆ ಮೇರೆಗೆ ಆಯೋಜಕರು ತುರ್ತು ಸಭೆ ನಡೆಸಿ ಎಲ್ಲಾ ಸ್ಪರ್ಧಿಗಳು, ಸಿಬ್ಬಂದಿಗಳನ್ನು ಬಿಡದಿಯ ಈಗಲ್ ಟನ್ ರೆಸಾರ್ಟ್ ಗೆ ಸ್ಥಳಾಂತರ ಮಾಡಲಾಗಿದೆ.

- Advertisement - 

ಜಾಲಿವುಡ್ ಸ್ಟುಡಿಯೋಸ್‌ನ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಸ್ಪರ್ಧಿಗಳು ಹಾಗೂ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿರುವ ಕುರಿತು ವರದಿಯಾಗಿದೆ.

ಒಂದು ವೇಳೆ ಸಮಸ್ಯೆ ಬಗೆಹರಿದರೆ ಮತ್ತೆ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳು ಕರೆತರಲಾಗುತ್ತದೆ. ಇಲ್ಲದಿದ್ದರೆ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪೊಲೀಸ್​ ಬಂದೋಬಸ್ತ್​:
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್  ವ್ಯವಸ್ಥೆ ಕಲ್ಪಿಸಿದ್ದಾರೆ.

 

 

 

 

Share This Article
error: Content is protected !!
";