ಮೈಸೂರು ದಸರಾದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಗತ್ತಿನ ಪ್ರಸಿದ್ದ ಮೈಸೂರು ದಸರಾ ಉತ್ಸವ2024ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 03 ರಿಂದ 11 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ2024”ನ್ನು ಮೈಸೂರಿನ ಹಳೆ ಡಿ.ಸಿ. ಕಚೇರಿ ಎದುರು, ಸೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲಾಗುವುದು.

ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರುಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ https://kpp.karnataka.gov.in  ಪಡೆದುಕೊಳ್ಳಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ್ 30 ಸಂಜೆ 5.00 ಗಂಟೆಗೆ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರುಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಮೇಲ್ [email protected]   ಮೂಲಕ ಸಲ್ಲಿಸುವುದು. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು560 002 ಹಾಗೂ ದೂರವಾಣಿ ಸಂ.080-22484516 / 22107704 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -  - Advertisement - 
Share This Article
error: Content is protected !!
";