5 ವರ್ಷ ನಾನೇ ಸಿಎಂ ಎಂದು ಹೇಳಿಕೊಳ್ಳುವ ಕರ್ಮ ಸಿದ್ದರಾಮಯ್ಯಗೆ ಬರಬಾರದಿತ್ತು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯ ಅವರಿಗೆ ಬರಬಾರದಿತ್ತು.
ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದು ಕೊಳ್ಳುತ್ತಿರುವುದರ ಹಿಂದೆ ಸಿಎಂ ಕುರ್ಚಿ ಅಲುಗಾಡುತ್ತಿರುವುದನ್ನು ಸೂಚಿಸುತ್ತಿದೆ ಎಂದು ಜೆಡಿಎಸ್ ಅಭಿಪ್ರಾಯಪಟ್ಟಿದೆ.

ನಾಯಕತ್ವ ಬದಲಾವಣೆ ಆಗಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಇಕ್ಬಾಲ್ ಹುಸೇನ್, ಹೆಚ್.ಸಿ ಬಾಲಕೃಷ್ಣ, ರಂಗನಾಥ್, ರವಿ ಗಾಣಿಗ  ಸೇರಿದಂತೆ ಹಲವರು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ.

- Advertisement - 

ಇನ್ನು ತಮ್ಮ ನಾಯಕನ ಕುರ್ಚಿಗೆ ಕುತ್ತು ಬಂದಿರುವುದು ಸ್ಪಷ್ಟವಾಗುತ್ತಲೇ ಸಿದ್ದರಾಮಯ್ಯ ಆಪ್ತರು ಸಹ ಕೂಗುಮಾರಿಗಳಂತೆ ಅವರ ಪರ ಬ್ಯಾಟ್ ಬೀಸುತ್ತಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯ ಮಾಡಿದೆ.

ಲಾಟರಿ ಸಿಎಂಸಿದ್ದರಾಮಯ್ಯ ಅವರೇ,ನಿಮ್ಮ  ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ನಿಮ್ಮ ನಾಯಕತ್ವದ ಬಗ್ಗೆ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೆಂಕಿ ಎದ್ದು, ಹಾದಿ ಬೀದಿಯಲ್ಲಿ ಹೊಗೆಯಾಡುತ್ತಿದೆ. ವಿಪಕ್ಷಗಳ ವಿರುದ್ಧ ಬೆಂಕಿಯುಗುಳಿದರೇ, ನಿಮ್ಮ ಹೊಟ್ಟೆ ಕಿಚ್ಚು ಮತ್ತಷ್ಟು ಉಲ್ಬಣಿಸುತ್ತದೆ ಹೊರತು ಉಪಶಮನವಾಗುವುದಿಲ್ಲ ಎಂದು ಜೆಡಿಎಸ್ ತಿರುಗೇಟು ನೀಡಿದೆ.

- Advertisement - 

 

 

Share This Article
error: Content is protected !!
";