ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ಶೀಘ್ರದಲ್ಲೇ ಕರ್ನಾಟಕ ದೇಶದಲ್ಲಿ 2ನೇ ಸ್ಥಾನಕ್ಕೇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಹೂಡಿಕೆಯಾಗಿರುವ 54,427 ಕೋಟಿ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಕೋಟಿ ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ.
ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ, ಇದರಿಂದ ಲಕ್ಷಾಂತರ ಉದ್ಯೋಗಗಳು ಸೃಷ್ಟಿ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.