ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಘನತ್ಯಾಜ್ಯ ವಿಲೇವಾರಿಯಲ್ಲಿ ಕರ್ನಾಟಕ ದೇಶಕ್ಕೇ ಮಾದರಿಯಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರತಿ ನಿತ್ಯ ಎಂಆರ್‌ಫ್ ಮೂಲಕ 31 ಮೆಟ್ರಿಕ್ ಟನ್ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮೆಚ್ಚುಗೆ ವ್ಯಕ್ತಪಡಿಸಿದೆ.
ಪ್ರತಿ ತಿಂಗಳು 930 ಮೆಟ್ರಿಕ್ ಟನ್ ತಾಜ್ಯ ನದಿ ಪಾತ್ರಗಳಿಗೆ ಸೇರದಂತೆ ವ್ಯವಸ್ಥೆ ಮಾಡಲಾಗಿದ್ದು ಸುಮಾರು 143 ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ವ್ಯಾಪ್ತಿಯ 223 ಗ್ರಾಮ ಪಂಚಾಯತ್‌ನಲ್ಲೂ ತಾಜ್ಯ ವಿಲೇವಾರಿ ಮಹಿಳೆಯರ ಶ್ರಮದಿಂದ ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಮೂಲಕ ನದಿ ಪಾತ್ರಗಳಲ್ಲಿ ತಾಜ್ಯ ಸೇರಿ ಕಲುಷಿತಗೊಳ್ಳುವುದನ್ನು ತಪ್ಪಿಸಿದಂತಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.