ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಏಪ್ರಿಲ್ 02ರಂದು ಬೆಳಿಗ್ಗೆ 8ಕ್ಕೆ “ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ” ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಭಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಲ್.ಆರ್.ಬಸವರಾಜ್ ಆಗಮಿಸಿ, ಗೌರವ ವಂದನೆ ಸ್ವೀಕರಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಭಾಗವಹಿಸುವರು ಎಂದು ಚಿತ್ರದುರ್ಗ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

