ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಕ್ಕರೆ ನಾಡು ಮಂಡ್ಯದಲ್ಲಿ ಇದೇ ತಿಂಗಳು 20ರಿಂದ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ,
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಷಿ ಅವರು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಿದರು.