ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ ಹೊರಡಿಸಿತ್ತು
ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ.

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ರಾಜ್ಯಗಳಿಗೆ ಸೂಚಿಸಿತ್ತು.

ಕಸ್ತೂರಿ ರಂಗನ್ ವರದಿಯು ಕರ್ನಾಟಕದ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲ ಲೋಪಗಳನ್ನು ತಿದ್ದುಪಡಿ ಮಾಡಿ, 19, 252.70 ಚದರ ಕಿ.ಮೀ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿತ್ತು.

ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ್ದರಿಂದ ಕರಡು ಅಧಿಸೂಚನೆ ತಿರಸ್ಕರಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ವಿವರಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";