ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಂತರ ನಡೆದ ಸಭೆಯಲ್ಲಿ ನಾಡಿನ ಜೀವನದಿ ‘ಕಾವೇರಿ’ ಮಾತೆಗೆ ಗೌರವ ಸಮರ್ಪಿಸಲು ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.
ಈ ವರ್ಷದ ದಸರಾ ಸಂದರ್ಭದಲ್ಲೇ ಮಂಡ್ಯ ಜಿಲ್ಲೆ ಕೃಷ್ಣರಾಜ ಸಾಗರದ (ಕೆಆರ್‌ಎಸ್) ಬಳಿ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಈ ನಿಟ್ಟಿನಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿ, ಕಾರ್ಯಕ್ರಮದ ಪೂರ್ವಸಿದ್ಧತೆಯ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಪ್ರಮುಖರೊಂದಿಗೆ ಚರ್ಚಿಸಲಾಯಿತು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.