ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಲು, ವಿದ್ಯುತ್, ಡೀಸೆಲ್ ದರ ಹೆಚ್ಚಳದ ನಂತರ ಇದೀಗ ಮತ್ತೊಂದು ದರ ಏರಿಕೆಯ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಿದ್ದತೆ ನಡೆಸಿದ್ದು, ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಹೆಚ್ಚಿಸಲು ಮುಂದಾಗಿದೆ ಎಂದು ಬಿಜೆಪಿ ಟೀಕಿಸಿದೆ.
ತಮಿಳುನಾಡಿಗೆ ಉಚಿತವಾಗಿ ರಾತ್ರೋರಾತ್ರಿ ನೀರು ಹರಿಸುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಕನ್ನಡಿಗರಿಗೆ ಬೆಲೆ ಏರಿಕೆಯ ಹೊರೆ ಏರಿಸುತ್ತಿದ್ದಾರೆ. ಜಲಮಂಡಳಿ ನಷ್ಟ ಸರಿದೂಗಿಸುವ ನೆಪದಲ್ಲಿ ಬೆಂಗಳೂರಿಗರ ಜೇಬಿಗೆ ಕನ್ನ ಹಾಕುತ್ತಿದ್ದಾರೆ ಎಂದು ಬಿಜೆಪಿ ಹರಿಹಾಯ್ದಿದೆ.
ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಈಗ ದಿನಬಳಕೆಯ ವಸ್ತು ಮತ್ತು ಸೇವೆಗಳ ದರ ಹೆಚ್ಚಿಸಿ, ಕನ್ನಡಿಗರಿಗೆ ದ್ರೋಹ ಬಗೆಯುತ್ತಿರುವ ಈ ಸರ್ಕಾರಕ್ಕೆ ಸ್ವಾಭಿಮಾನಿ ಕನ್ನಡಿಗರೆಲ್ಲರೂ ತಪ್ಪದೇ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ಕರೆ ನೀಡಿದೆ.