ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಹೆಮ್ಮೆಯ KSDL ಸಂಸ್ಥೆಯ ಅಪ್ರತಿಮ ಸಾಧನೆಯನ್ನು ಗಮನಿಸಿ, ರಾಜ್ಯ ಸರ್ಕಾರವು ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ದಿನವಾದ ಶುಕ್ರವಾರದಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಉತ್ಪಾದನೆ, ಮಾರಾಟ ಹಾಗೂ ಲಾಭಗಳಿಕೆಯಲ್ಲಿ ಹೊಸ ಹಂತವನ್ನು ತಲುಪಿದ KSDL ಸಂಸ್ಥೆ, ತಮ್ಮ ದಿಟ್ಟ ಹೆಜ್ಜೆಗಳಿಂದ ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬಿದೆ. ಸಂಸ್ಥೆಯ ಎಲ್ಲ ಸಿಬ್ಬಂದಿ ವರ್ಗದ ಶ್ರಮ ಹಾಗೂ ಸಮರ್ಪಣೆಗೆ ಲಭಿಸಿದ ಗೌರವ ಇದಾಗಿದೆ.
ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ ಎಲ್ಲ ಸಾಧಕರಿಗೆ, ಮಹನೀಹರಿಗೆ ಸಚಿವ ಎಂ.ಬಿ ಪಾಟೀಲ್ ಅಭಿನಂದನೆ ತಿಳಿಸಿದ್ದಾರೆ.

