ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿ ಕಾರಣ – ಡಿ.ಕೆ‌ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ. ಜಿಲ್ಲೆ:
ನಾಡಪ್ರಭು ಕೆಂಪೇಗೌಡ ರವರ 516 ನೇ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಬೆಂಗಳೂರು ಅಂತರಾಷ್ಟ್ರೀಯ ವಿಮಾನದ ನಿಲ್ದಾಣದ ಬಳಿ ಇರುವ ನಾಡಪ್ರಭು ಕೆಂಪೇಗೌಡ ರವರ 118 ಅಡಿ ಎತ್ತರದ ಕಂಚಿನ ಪ್ರತಿಮೆಗೆ ಪೂಜ್ಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಯವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್.ಮುನಿಯಪ್ಪರವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ.ಶಿವಕುಮಾರ್ ಮಾತನಾಡಿ ಇದು ಒಂದು ಐತಿಹಾಸಿಕ ದಿನ ಎಂದು ಹೇಳಬಹುದು ಕೆಂಪೇಗೌಡರು ಬೆಂಗಳೂರು ನಗರ ಕಟ್ಟದೇ ಹೋಗಿದ್ದರೆ ಇಂದು ನಾವು ಯಾರು ಕೂಡ ಬೆಂಗಳೂರಿನಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿರಲಿಲ್ಲ.

- Advertisement - 

ಬೇರೆ ರಾಜ್ಯಗಳಿಂದ ಹಳ್ಳಿಗಳಿಂದ ಜನರು ಕೆಲಸ ಹರಿಸುತ್ತ ಬೆಂಗಳೂರಿಗೆ ಬಂದು ಜೀವನ ನಡೆಸುತ್ತಿದ್ದಾರೆ. ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಐಟಿ ಬಿಟಿ ಕಂಪನಿಗಳ ತವರೆನಿಸಿಕೊಂಡಿದೆ.

ಒಂದು ನದಿ ಮೂಲವು ಇಲ್ಲದ ಬೆಂಗಳೂರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದರು. ಅವರ ಜ್ಞಾನದ ಮೂಲಕ ಹರಿದ ಅವರ ಶ್ರಮ ಇಂದಿಗೂ ಬೆಂಗಳೂರು ಉತ್ತಮ ಭೌಗೋಳಿಕ ಪ್ರದೇಶದಲ್ಲಿ ನಿರ್ಮಾಣವಾದ ನಗರವಾಗಿದೆ. ಅವರ ಆದರ್ಶ ಮೌಲ್ಯಗಳು ಚಿರಸ್ಥಾಯಿಯಾಗಿ ಉಳಿಯಬೇಕು ಎಂದರು.

- Advertisement - 

ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಬಯ್ಯಪ್ಪಾ ಅಧ್ಯಕ್ಷ ಶಾಂತಕುಮಾರ್, ಬಯ್ಯಪ್ಪಾ ಸದಸ್ಯರಾದ ಪ್ರಸನ್ನಕುಮಾರ್ ,ಮಂಜುನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

 

Share This Article
error: Content is protected !!
";