ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿತಗಾರ- ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯರವರ ಪುಣ್ಯತಿಥಿಯಂದು ಸರ್ಕಾರದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.

ವಿಧಾನಸೌಧದಲ್ಲಿರುವ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

- Advertisement - 

ಕೆಂಗಲ್ ಹನುಮಂತಯ್ಯನವರು ಒಬ್ಬ ದಕ್ಷ ಆಡಳಿತಗಾರರಾಗಿದ್ದು, ಕರ್ನಾಟಕದ ಎರಡನೇ ಮುಖ್ಯಮಂತ್ರಿಯಾಗಿದ್ದರು.  ಸ್ವಾತಂತ್ರ್ಯ ನಂತರವಿದ್ದ ಸಮಸ್ಯೆಗಳನ್ನು ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಎದುರಿಸಿದರು.

ವಿಧಾನಸೌಧದ ಭವ್ಯ ಕಟ್ಟಡ ನಿರ್ಮಾಣಕ್ಕೆ ಅವರು ರೂವಾರಿಯಾಗಿದ್ದರೂ, ಕಟ್ಟಡದ ಉದ್ಘಾಟನೆಯ ವೇಳೆಗೆ ಅವರು ಅಧಿಕಾರದಲ್ಲಿರಲಿಲ್ಲ. ಜನಪ್ರತಿನಿಧಿಯಾಗಿ ಪ್ರಾಮಾಣಿಕವಾಗಿ ಜನರ ಸೇವೆ ಸಲ್ಲಿಸುವುದು ಅತಿಮುಖ್ಯ ಎಂದು ವಿಧಾನಸೌಧದ ಕಟ್ಟಡದ ಪೂರ್ವಭಾಗದಲ್ಲಿ ಜನರ ಕೆಲಸ ದೇವರ ಕೆಲಸಎಂದು ಕೆತ್ತಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

- Advertisement - 

ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಕೆಂಗಲ್ ಹನುಮಂತಯ್ಯ ಅವರ ಸೇವೆಯನ್ನು ಸರ್ಕಾರ  ಸ್ಮರಿಸುತ್ತಿದೆ. ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ.

ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿ, ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.

 

Share This Article
error: Content is protected !!
";