ಕಿಸಾನ್ ಕ್ರೆಡಿಟ್ ಕಾರ್ಡ : ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್ 15 ರಿಂದ 2025 ಮಾರ್ಚ್ 31 ರವರಗೆ ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಂದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು ಪಶು ಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";