ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವದ ಬಗ್ಗೆ ಜನ ಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ ೧೫ರಂದು ಜಿಲ್ಲೆಯಲ್ಲಿ 130 ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಚಿತ್ರದುರ್ಗ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದೆ
ಮತ್ತು ಅತಿ ಹೆಚ್ಚು ಸ್ವಯಂ ಸೇವಾ ಸಂಘಟನೆಗಳು ಪಾಲ್ಗೊಳಿವಿಕೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಒಟ್ಟು 2 ಪ್ರಶಸ್ತಿಗಳಿಗೆ ಭಾಜನವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಜಿಲ್ಲೆಗೆ ಪ್ರಶಸ್ತಿ ಲಭಿಸಲು ಕಾರಣರಾದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಂಘ ಸಂಸ್ಥೆ, ಸಾರ್ವಜನಿಕರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ರಶಸ್ತಿಯನ್ನು ಇದೇ ನವೆಂಬರ್ ೨೬ರ ಬೆಳಿಗ್ಗೆ ೧೧ ಗಂಟೆಗೆ ಬೆಂಗಳೂರಿನ ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.