ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪನವರ ಧರ್ಮ ಪತ್ನಿ ಕೊಟ್ರಮ್ಮ(೮೭) ಸೋಮವಾರ ಸಂಜೆ ೫-೩೦ ಕ್ಕೆ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ನೆಹರು ನಗರದಲ್ಲಿರುವ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನದವರೆಗೆ ಮೃತರ ಅಂತಿಮ ದರ್ಶನವಿರುತ್ತದೆ. ಮೃತರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

