ಕೆಪಿಸಿಸಿ ಪ್ರಚಾರ ಸಮಿತಿ ಸಭೆ ನಡೆಸಿದ ಡಿಕೆಶಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅವರ ನೇತೃತ್ವದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಸಭೆಯನ್ನು ಭಾನುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಲಾಯಿತು.

- Advertisement - 

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸುವುದು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವುದು, ಸರ್ಕಾರದ ಗ್ಯಾರಂಟಿಗಳನ್ನು ಜನ ಸಾಮಾನ್ಯರಿಗೆ ತಲುಪಿಸುವುದು ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ಚರ್ಚಿಸಿದರು.

- Advertisement - 

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಸಹ ಅಧ್ಯಕ್ಷ ಡಾ. ಎಲ್ ಹನುಮಂತಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";