ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿಯಲ್ಲಿ ಆರಂಭವಾಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಮ್ಮ ತಂಡಗಳೊಂದಿಗೆ ಭಾಗವಹಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಶುಕ್ರವಾರದಿಂದ ಆರಂಭವಾಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ಅಧ್ಯಕ್ಷರುಗಳು ಭಾಗವಹಿಸಿದ್ದರು.