ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಸೆಪ್ಟೆಂಬರ್ 2 ರಂದು ಚಿತ್ರದುರ್ಗ ನಗರದ ಕಾಂಗ್ರೆಸ್ ಭವನಕ್ಕೆ ಬೆಳಿಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ರಘು ಗೌಡ ತಿಳಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ನಮಾಹಿತಿ ನೀಡಿದ್ದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಹಾಗೂ ಪದಾಧಿಕಾರಿಗಳೊಂದಿಗೆ ಸೌಜನ್ಯದ ಮಾತುಕತೆ ಮಾಡಲಿದ್ದಾರೆ.
ಸೌಜನ್ಯದ ಮಾತುಕತೆ ಮುಗಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರೊಂದಿಗೆ ಮುರುಳೀಧರ ಹಾಲಪ್ಪನವರು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಎಐಸಿಸಿ ಅಧ್ಯಕ್ಷ ದಿವಂಗತ ನಿಜಲಿಂಗಪ್ಪ ಅವರು ವಾಸಿಸುತ್ತಿದ್ದ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿ ಕಾರ್ಯಕ್ರಮ ಒಂದು ಮಹತ್ವ ಪೂರ್ಣವಾಗಿದೆ. ಮುಂದಿನ ಕಾರ್ಯಕ್ರಮದ ವಿವರ ನಂತರ ತಿಳಿಸಲಾಗುವುದು ಎಂದು ಪ್ರವಾಸದ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಮುಖಂಡತ್ವದ ನಾಯಕರು ಈ ಸಮಯದಲ್ಲಿ ಹೆಚ್ಚಾಗಿ ಸೇರಲು ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.