ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಹೈ.ಕ. ವೃಂದದಲ್ಲಿ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು /
ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳಿಗೆ ಪತ್ರಿಕೆ–2 ನಿರ್ದಿಷ್ಟ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮಾರ್ಚ್ 02 ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ–1) ಹುದ್ದೆಗಳಿಗೆ ಪತ್ರಿಕೆ–2 ನಿರ್ದಿಷ್ಟ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮಾರ್ಚ್ 04 ರಂದು ನಡೆಸಲಾಗುತ್ತಿದೆ.
ಈ ಪರೀಕ್ಷೆಗಳ “ಪ್ರವೇಶ ಪತ್ರಗಳನ್ನು” ಫೆಬ್ರವರಿ 21 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ಸೈಟ್ http://kpsc.kar.nic.in ರ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.