ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು – 70 (ಉ.ಮೂ.) ಮತ್ತು 06 (ಹೈ.ಕ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2024 ನೇ ಮಾರ್ಚ್ 14 ರಂದು ಅಧಿಸೂಚನೆಗಳನ್ನು ಹೊರಡಿಸಿರುತ್ತದೆ.
ಈ ಅಧಿಸೂಚನೆಗೆ ಸಂಬಂಧಿಸಿದಂತೆ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿರುವ ಹಿನ್ನೆಲೆಯಲ್ಲಿ ಅಧಿಸೂಚನೆಗಳಲ್ಲಿನ ಮೋಟಾರು ವಾಹನ ನಿರೀಕ್ಷಕರು –70 (ಉ.ಮೂ.ವೃ) ಮತ್ತು 06 (ಹೈ.ಕ) ಹುದ್ದೆಗಳಿಗೆ ಸಾಮಾನ್ಯ ಆರ್ಹತೆ– 38 ವರ್ಷಗಳು,
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ– 41 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ–1- 43 ವರ್ಷಗಳು” ಎಂಬುದಾಗಿ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿ, ತಿದ್ದುಪಡಿ ಅಧಿಸೂಚನೆಯನ್ನು ಅಕ್ಟೋಬರ್ 30 ರಂದು ಹೊರಡಿಸಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳಿಗೆ ನವೆಂಬರ್ 5 ರಿಂದ 20 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಕ್ಟೋಬರ್ 30 ರ ತಿದ್ದುಪಡಿ ಅಧಿಸೂಚನೆ ಹಾಗೂ 2024 ನೇ ಮಾರ್ಚ್ 14 ರ ಮೂಲ ಅಧಿಸೂಚನೆಗಳನ್ನು ಆಯೋಗದ ವೆಬ್ಸೈಟ್ http://kpsc.kar.nic.in/Lists ನಲ್ಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.