ಹೊಸ ತಿರುವು ಪಡೆಯುತ್ತಿರುವ KPSC ಅಕ್ರಮಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶಾದ್ಯಂತ ತನ್ನ ಯಡವಟ್ಟುಗಳಿಂದಲೇ ಚರ್ಚೆಯಲ್ಲಿರುವ
KPSC ಅಕ್ರಮಗಳು ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಂಡು ಬಯಲಾಗುತ್ತಿವೆ. ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳಿಗೆ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳನ್ನು ಸೃಷ್ಟಿಸಿ ಅಕ್ರಮಗಳ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಮುನ್ನವೂ ಗೊಂದಲ ಸೃಷ್ಟಿಸಿ, ಪರೀಕ್ಷೆಯ ನಂತರವೂ ಸಂಕಟ ತಂದೊಡ್ಡಿತ್ತು.

ಇದೀಗ KPSCಯ ಭಾರಿ ಅಕ್ರಮ ಬಯಲಾಗುವ ಮೂಲಕ ಉದ್ಯೋಗದಾತ ಸಂಸ್ಥೆಯ ಹುಳುಕು ಸರಿಪಡಿಸುವಲ್ಲಿ ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರವೂ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ.

- Advertisement - 

ಕರ್ನಾಟಕದ ಆಡಳಿತದಲ್ಲಿ ದಕ್ಷತೆ ತುಂಬಬೇಕಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಆಯ್ಕೆ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗದ ವ್ಯವಸ್ಥೆಗೆ ಅಕ್ರಮಗಳ ಸುರುಳಿ ಸುತ್ತಿಕೊಂಡಿರುವಾಗ ಉದ್ಯೋಗಾಕಾಂಕ್ಷಿತ ರಾಜ್ಯದ ಅಭ್ಯರ್ಥಿಗಳಿಗೆ ನ್ಯಾಯ ಸಿಗುವುದಾದರೂ ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ದಪ್ಪಚರ್ಮದ ಹಾಗೂ ಭ್ರಷ್ಟಾಚಾರದ ಕಪ್ಪುಮಸಿ ಅಂಟಿಸಿಕೊಂಡಿರುವ ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅಕ್ರಮವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಲಕ್ಷಾಂತರ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನ್ಯಾಯಯುತ ಮಾರ್ಗದೆಡೆಗೆ ಹೆಜ್ಜೆ ಹಾಕಲಿ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

- Advertisement - 

 

Share This Article
error: Content is protected !!
";