ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆ ಇಲ್ಲವಾಗಿದೆ ಇದೊಂದು ಎಡವಟ್ಟು ಕಾಂಗ್ರೆಸ್ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಹೊಣೆಗೇಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಜೆಡಿಎಸ್ ಹೇಳಿದೆ.
ಪ್ರಶ್ನೆಪತ್ರಿಕೆಗಳ ಭಾಷಾಂತರದಲ್ಲಿ ಗೊಂದಲದಿಂದ ಮುಂದೂಡಿಕೆಯಾಗಿ ಭಾನುವಾರ ನಡೆದ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯಲ್ಲಿಯೂ ಕರ್ನಾಟಕ ಲೋಕಸೇವಾ ಆಯೋಗ ಮತ್ತೆ ಎಡವಟ್ಟು ಮಾಡಿದೆ ಎಂದು ಜೆಡಿಎಸ್ ದೂರಿದೆ.
ಕೆಎಎಸ್‌ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ನೂರಾರು ತಪ್ಪುಗಳು ಕಂಡು ಬಂದಿದ್ದು, ಕನ್ನಡ ಭಾಷಾಂತರದಲ್ಲಿಯೂ ಹಲವು ದೋಷಗಳು ಪತ್ತೆಯಾಗಿದೆ. ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಮತ್ತು ಒಎಂಆರ್ ಶೀಟ್ ಸಂಖ್ಯೆ ಅದಲು-ಬದಲಾಗಿದ್ದು, ಕೆಪಿಎಸ್‌ಸಿ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಬೌದ್ಧಿಕ ದಿವಾಳಿತನವನ್ನು ಜಗಜ್ಜಾಹೀರು ಮಾಡಿದೆ ಎಂದು ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿದೆ.
ಕೆಎಎಸ್‌ಪರೀಕ್ಷೆಗೆ ನಡೆಸಲು ಕೆಪಿಎಸ್‌ಸಿ ಒಟ್ಟು 28 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದೆ. ಆದರೆ ಪದೇಪದೇ ತಪ್ಪು ಮಾಡುತ್ತಿರುವ ಕೆಪಿಎಸ್‌ಸಿ (KPSC) ಯನ್ನು ಸುಧಾರಣೆ ಮಾಡಲು ಸಾಧ್ಯವಾಗದಷ್ಟು ದುರ್ಬಲವಾಗಿರುವ ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಸುಧಾರಣೆ ಸಾಧ್ಯವೇ ? ಎಂದು ಜೆಡಿಎಸ್ ಕಟುವಾಗಿ ಪ್ರಶ್ನಿಸಿದೆ.