ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸರ್ಕಾರದ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ದೃಶ್ಯಗಳು ಸಿಸಿ ಟಿವಿಯಲ್ಲಿ ದಾಖಲಾಗಿದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಗಳು ಹರಿದಾಡಿದ್ದು ದೃಢಪಟ್ಟಿರುವುದರಿಂದ ಜೆಜೆಹಳ್ಳಿ ಹೋಬಳಿಯ ಕೆ.ಆರ್.ಹಳ್ಳಿ ವೃತ್ತದ ಗ್ರಾಮ ಆಡಳಿತಾಧಿಕಾರಿ ದಾಸೇಗೌಡ ಇವರನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹಿರಿಯೂರು ತಹಶೀಲ್ದಾರ್ ಅವರ ವರದಿ ಆಧರಿಸಿ ಗ್ರಾಮ ಆಡಳಿತ ಅಧಿಕಾರಿ ಜಿ.ಎಂ.ದಾಸೇಗೌಡರನ್ನು ಅಕ್ಟೋಬರ್-1 ರಂದು ಜಿಲ್ಲಾಧಿಕಾರಿಗಳು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಟಿ.ವೆಂಕಟೇಶ್ ಇವರು ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ.