ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮಹಾವಿದ್ಯಾಲಯ, ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಇಲಾಖೆ, ರೈತ ಉತ್ಪಾದಕರ ಸಂಸ್ಥೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೃಷಿ ಮೇಳ-2025 “ಸಮಗ್ರ ಕೃಷಿ-ರೈತನ ಪ್ರಗತಿ” ಕಾರ್ಯಕ್ರಮವನ್ನು ಇದೇ ನವೆಂಬರ್ 14 ಮತ್ತು 15ರಂದು ಹಿರಿಯೂರು ಬಬ್ಬೂರುಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ನ.14ರಂದು ಬೆಳಿಗ್ಗೆ 10.30ಕ್ಕೆ ಕೃಷಿ ಮೇಳದ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಸಂಸದ ಗೋವಿಂದ ಎಂ. ಕಾರಜೋಳ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ತಾಂತ್ರಿಕ ಕೈಪಿಡಿಗಳ ಬಿಡುಗಡೆ ಮಾಡುವರು.
ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಅವರು ಅತ್ಯುತ್ತಮ ಕೃಷಿ ಕಾರ್ಮಿಕರಿಗೆ ಸನ್ಮಾನ ಮಾಡುವರು. ಕೆಳದಿ ಶಿವಪ್ಪನಾಯಕ ಕೃಷಿ ತೋಟಗಾರಿಕೆ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ.ಜಗದೀಶ್ ಘನ ಉಪಸ್ಥಿತಿ ವಹಿಸುವರು. ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ,
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಪುಸ್ತಕ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು,
ಬಬ್ಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುದ್ರಮ್ಮ ಸಿದ್ದಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು,
ಭಾರತೀಯ ಕೃಷಿ ಅನುಸಂಧಾನ ಪರಿಷತ್-ಅಟಾರಿ ನಿರ್ದೇಶಕ ಡಾ.ವಿ.ವೆಂಕಟಸುಬ್ರಮಣಿಯನ್, ಹಿರಿಯೂರು ತಹಶೀಲ್ದಾರ್ ಎಂ.ಸಿದ್ದೇಶ್ ಭಾಗವಹಿಸುವರು.
ಅತಿಥಿಗಳಾಗಿ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಡಾ.ಪಿ.ಕೆ.ಬಸವರಾಜ, ಡಾ.ಬಿ.ಕೆ.ಕುಮಾರಸ್ವಾಮಿ, ಜೆ.ಬಿ.ಕಾವೇರಿಯಪ್ಪ, ಹೆಚ್.ಡಿ.ದೇವಿಕುಮಾರ್, ಹೆಚ್.ಎಸ್.ಶಶಾಂಕ್, ಡಾ.ವಿ.ಶ್ರೀನಿವಾಸ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಶೋಧನಾ ನಿರ್ದೇಶಕ ಡಾ.ಬಿ.ಹೇಮ್ಲಾನಾಯಕ್, ಸಂಶೋಧನಾ ನಿರ್ದೇಶಕ ಡಾ.ದುಷ್ಯಂತ್ ಕುಮಾರ್, ವಿಸ್ತರಣಾ ನಿರ್ದೇಶಕ ಡಾ.ಜಿ.ಕೆ.ಗಿರಿಜೇಶ್, ಡೀನ್‍ಗಳಾದ ಡಾ.ನಾರಾಯಣ ಎಸ್.ಮಾರ್ವಕರ್, ಡಾ.ಸಿ.ಜೆ.ಶ್ರೀಧರ್, ಆಡಳಿತಾಧಿಕಾರಿ ಡಾ.ಬಿ.ಸಿ.ಧನಂಜಯ್, ಹಣಕಾಸು ನಿಯಂತ್ರಣಾಧಿಕಾರಿ ಹೆಚ್.ಎಂ.ಪ್ರಿಯಾಂಕ, ವಿಶೇಷಾಧಿಕಾರಿ ಡಾ.ಎಸ್.ಯು.ಪಾಟೀಲ್ ಸೇರಿದಂತೆ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

