ರೈತರಿಗೆ ನೀಡಿರುವ ಜಮೀನು ವಾಪಸ್ ಪಡೆಯುವ ಉದ್ದೇಶ ಸರ್ಕಾರಕ್ಕಿಲ್ಲ- ಕೃಷ್ಣ ಭೈರೇಗೌಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಫ್‌ಮಂಡಳಿಗೆ ದಾನಿಗಳು ನೀಡಿದ 14,201 ಎಕರೆ ವಕ್ಫ್‌ಆಸ್ತಿಯಿತ್ತು. ಅದರಲ್ಲಿ ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟ್ವೀಟ್ ಮಾಡಿ ತಿಳಿಸಿದ್ದಾರೆ.

133 ಎಕರೆ 17 ಗುಂಟೆ ಬೇರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಹೊನವಾಡ ಗ್ರಾಮದಲ್ಲಿ 1200 ಎಕರೆ ಜಮೀನನ್ನು ವಕ್ಫ್‌ ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುದನ್ನು ತೆಗೆಸಿದ್ದಾರೆ. ಸರಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ.

ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಕೃಷ್ಣಭೈರೇಗೌಡ ಆರೋಪಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";