ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೆಚ್ ಡಿ ಕೋಟೆಯ ಪ್ರಮುಖ ನಾಯಕರಾದ ಕೃಷ್ಣ ನಾಯಕ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ಕಾರ್ಯಕ್ರದಲ್ಲಿ ಕೃಷ್ಣ ನಾಯಕ್ ಅವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕ ಜೆಡಿಎಸ್ ಪಕ್ಷಕ್ಕೆ ಅವರನ್ನು ಮರು ಸೇರ್ಪಡೆ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಹೆಚ್.ಎಂ. ರಮೇಶ್ ಗೌಡ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.