ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಭೂ ಪರಿಹಾರ ಮತ್ತು ಹೆಚ್ಚುವರಿ ಭೂ ಪರಿಹಾರ ಕೋರಿ ವಿವಿಧ ನ್ಯಾಯಾಲಯಗಳಲ್ಲಿ ಸಲ್ಲಿಸಲಾಗಿರುವ ಪ್ರಕರಣಗಳ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್ ಮತ್ತು ಎಂ.ಬಿ.ಪಾಟೀಲ್ ಅವರೊಂದಿಗೆ ಸಭೆ ನಡೆಸಲಾಯಿತು ಎಂದು ಜಲಸಂಪನ್ಮೂಲ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ಕೃಷ್ಣ ಮೇಲ್ದಂಡೆ ಯೋಜನೆ ಹಂತ- 3; ಸರಕಾರದ ಬದ್ಧತೆ ದೃಢ!ವಾಗಿದೆ ಎಂದು ಅವರು ತಿಳಿಸಿದರು. ಕೃಷ್ಣ ಮೇಲ್ದಂಡೆ ಯೋಜನೆ ಹಂತ -3 ಪೂರ್ಣಗೊಳಿಸಲು ನಮ್ಮ ಸರಕಾರ ಬದ್ಧವಾಗಿದೆ. ಈ ಸಂಬಂಧ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ,
ಭೂ ಪರಿಹಾರ ಮತ್ತು ಹೆಚ್ಚುವರಿ ಭೂ ಪರಿಹಾರ ಕೋರಿ ವಿವಿಧ ನ್ಯಾಯಾಲಯಗಳಲ್ಲಿ ಸಲ್ಲಿಸಲಾಗಿರುವ ಪ್ರಕರಣಗಳ ಕುರಿತು ವಿಧಾನಸೌಧದಲ್ಲಿ ಜಲಸಂಪನ್ಮೂಲ ಖಾತೆ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಲಾಯಿತು ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಸಚಿವರುಗಳಾದ ಹೆಚ್.ಕೆ ಪಾಟೀಲ್, ಆರ್.ಬಿ ತಿಮ್ಮಾಪುರ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

