ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ನಿರ್ಮಾಣ, ಭೂ ಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳ
ಕುರಿತು ಬುಧವಾರ ವಿಧಾನಸೌಧದಲ್ಲಿ ಸಂಪುಟ ಸಹೋದ್ಯೋಗಿ ಸಚಿವರು, ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಭೆ ನಡೆಸಿ, ಚರ್ಚಿಸಿದರು.

