ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ ಎಂದು ಸಿದ್ದರಾಮಯ್ಯ ದೂರಿದರು.
ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ.
ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.