ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯಾಧಿಕಾರಿ ಪ್ರಶಸ್ತಿ ಪ್ರದಾನ ಮಾಡಿದ ಕೃಷ್ಣಭೈರೇಗೌಡ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

- Advertisement - 

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್ ಅವರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024ರ ಪ್ರಶಸ್ತಿ ನೀಡಿ ಗೌರವಿಸಿದರು.

- Advertisement - 

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ.

ಈ ಎಲ್ಲಾ ಕೊಡುಗೆಗಳನ್ನು ಆಧರಿಸಿ, ಕಂದಾಯ ಇಲಾಖೆ ವತಿಯಿಂದ 2023-24ನೇ ಸಾಲಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

- Advertisement - 

Share This Article
error: Content is protected !!
";