ವರ್ಷದಲ್ಲಿ 3ನೇ ಬಾರಿ ಭರ್ತಿಯಾದ ಕೆಆರ್ ಎಸ್ ಡ್ಯಾಂ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಆರ್ ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ!, ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ.

- Advertisement - 

ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ.

ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ ಎಂದು ಶಿವಕುಮಾರ್ ತಿಳಿಸಿದರು.

- Advertisement - 

 

 

Share This Article
error: Content is protected !!
";